ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶುಲ್ಕ ಈ ಬಾರಿ ದುಬಾರಿಯಾಗಲಿದೆ. ರಾಜ್ಯದಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕವನ್ನು 2019-20ನೇ ಸಾಲಿಗೆ ಶೇ. 10ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಕಾಮೆಡ್ಕೆ ಸೇರಿದಂತೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳೊಂದಿಗೆ ಶುಲ್ಕ ನಿಗದಿ ಕುರಿತಂತೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು. ಈ