ಹಲವು ಅನುಮಾನಗಳಿಗೆ ಎಡೆ ಮಾಡಿದ್ದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಸಾವಿನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ.ರಾಯಚೂರಿನಲ್ಲಿ ವಿದ್ಯಾರ್ಥಿನಿ ಮಧು ಪತ್ತಾರ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಬಂದಿದ್ದು, ಆತ್ಮಹತ್ಯೆ ಅಲ್ಲ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಎಫ್ ಐಆರ್ ದಾಖಲಿಸಲಾಗಿದೆ. ಹೆತ್ತವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಸುದರ್ಶನ ಯಾದವ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.ಪ್ರಕರಣದ ಪ್ರಾಥಮಿಕ ತನಿಖೆ ಕೈಗೊಂಡ ಪೊಲೀಸರು, ಕೆಲವೊಂದು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಅದರ ಆಧಾರದಡಿ ಅತ್ಯಾಚಾರ