50 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಟೆಂಡರ್ಗಳ ಪರಿಶೀಲನೆಗೆ ನಿವೃತ್ತ ಉನ್ನತಾಧಿಕಾರಿಗಳು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ತಾಂತ್ರಿಕ ಅಧ್ಯಯನ ಸಂಸ್ಥೆಗಳನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ಸಮಿತಿಯನ್ನು ಕೆಟಿಪಿ ಕಾಯ್ದೆಯನ್ವಯ ರಚಿಸಲಾಗಿದೆ. ಸಮಿತಿಯು ಕಾಮಗಾರಿಯ ಅಂದಾಜು ಮೊತ್ತ, ಕೆಟಿಟಿಪಿಯನ್ವಯ ಟೆಂಡರ್ ನಿಯಮಗಳು ಇವುಗಳನ್ನು ಪರಿಶೀಲಿಸಿದ ನಂತರವೇ