ಮಾರಕ ಕೊರೊನಾ ವೈರಸ್ ಜೈಲು ಸಿಬ್ಬಂದಿಗೆ ತಗುಲಿರುವುದು ದೃಢಪಟ್ಟಿದೆ. ರಾಮನಗರ ಜಿಲ್ಲಾ ಕಾರಾಗೃಹದ ಮೂವರು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಮನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15 ಕ್ಕೆ ಏರಿದೆ.ವಾರದ ಹಿಂದೆ ಶಾನುಭೋಗನಹಳ್ಳಿಯಲ್ಲಿ ವಾಸವಿದ್ದ ಜಿಲ್ಲಾ ಕಾರಾಗೃಹ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢ ಪಟ್ಟಿತ್ತು. ಈತನೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಮತ್ತೆ ಇದೀಗ ಈತನ ಸಂಪರ್ಕದಲ್ಲಿದ್ದ ಮೂವರಿಗೆ ಸೋಂಕು ಹರಡಿದೆ. ಈ ಸೋಂಕಿತರು ಕ್ವಾರೆಂಟೈನ್