ರಾಜ್ಯದಲ್ಲಿ ಬಹು ನಿರೀಕ್ಷಿತ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ.. ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸ್ತಿದ್ದು ಕದನದ ಕಣದಲ್ಲಿ ಗೆಲ್ಲುವ ಕಲಿ ಯಾರಾಗ್ತಾರೆ ಅನ್ನೋ ಕೌತುಕ ರಾಜ್ಯದಲ್ಲಿ ಮನೆ ಮಾಡಿದೆ. ಈ ಮಧ್ಯೆ ಇಂದಿನಿಂದ ಬ್ಯಾಲೆಟ್ ಪೇಪರ್ ಮತದಾನ ಆರಂಭವಾಗಿದೆ. 80 ವರ್ಷ ಮೇಲ್ಪಟ್ಟ ವೃದ್ಧರು, ಹಾಗೂ ವಿಶೇಷ ಚೇತನರು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರಿಗೆ ಇವತ್ತು ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಡಲಾಗಿದೆ. ಅದರಲ್ಲೂ 80 ವರ್ಷ ಮೇಲ್ಪಟ್ಟವರು ಹಾಗೂ