ಬೆಂಗಳೂರು (ಸೆ,12) : ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು