ಬೆಂಗಳೂರು: ಮಲೇರಿಯಾ, ಚಿಕನ್ ಗುನ್ಯಾ, ಡೆಂಘಿ, ಹೆಚ್1-ಎನ್1 ಸೇರಿದಂತೆ ರಾಜ್ಯದ ಹಲವೆಡೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ರೋಗದ ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಗಿದೆ. ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರಿನಲ್ಲಿ ತಲಾ ಇಬ್ಬರು, ಮೈಸೂರು, ಬಳ್ಳಾರಿ, ಉತ್ತರ ಕನ್ನಡ,ಬೆಳಗಾವಿ, ತುಮಕೂರು, ಕೋಲಾರ ಹಾಗೂ ಚಿತ್ರದುರ್ಗದಲ್ಲಿ ತಲಾ ಒಬ್ಬರು ಎಚ್1-ಎನ್1ನಿಂದ ಮೃತರಾಗಿದ್ದಾರೆ. ಹಾಗೆಯೇ ಬಿಬಿಎಂಪಿ ವ್ಯಾಪ್ತಿಯಲ್ಲಿ 819, ಬೆಂಗಳೂರು ನಗರದಲ್ಲಿ 198, ಮೈಸೂರಿನಲ್ಲಿ 257, ಉಡುಪಿಯಲ್ಲಿ