ವಿದ್ಯಾರ್ಥಿಗಳು ಯಾವುದೇ ತಪ್ಪಿಲ್ಲದೆ ಸಿಇಟಿ ಅರ್ಜಿ ತುಂಬುವುದನ್ನು ಕಲಿಸಲು ವಿಜ್ಞಾನ ಪಠ್ಯಕ್ರಮವಿರುವ ಪ್ರತಿಯೊಂದು ಪದವಿಪೂರ್ವ ಕಾಲೇಜಿನಲ್ಲೂ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.ಈ ಸಂಬಂಧವಾಗಿ ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಜತೆ ಸಚಿವರು ಶುಕ್ರವಾರ ಮಹತ್ತ್ವದ ಸಭೆ ನಡೆಸಿದರು. ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು,ಎಸ್ಸೆಸ್ಸೆಲ್ಸಿ ಹಂತದಲ್ಲಿನ ವಿದ್ಯಾರ್ಥಿ ಸಾಧನೆ ಟ್ರಾಕಿಂಗ್ ವ್ಯವಸ್ಥೆ (ಎಸ್ಎಟಿಎಸ್)ಯನ್ನು ಕರ್ನಾಟಕ ಪರೀಕ್ಷಾ