ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ್ರಕರಣ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪವಾಗಿದ್ದು, ಪ್ರಕರಣದ ಆರೋಪಿಗಳನ್ನು ಗಡಿಪಾರು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಕಲಾಪ ಆರಂಭವಾದಾಗ ನಿಲುವಳಿ ಸೂಚನೆ ಪ್ರಸ್ತಾಪ ಮಂಡಿಸಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಗೊತ್ತಾಗುತ್ತಿಲ್ಲ. ಹಲ್ಲೆ, ಹತ್ಯೆ, ಕೊಲೆ, ಅತ್ಯಾಚಾರ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಮುಖ್ಯಮಂತ್ರಿಗಳು, ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಶಾಸಕರ ಪುತ್ರ