ನಿಮ್ಮದೊಂದು ಸರ್ಕಾರ, ನೀವೊಬ್ರು ಹೋಂ ಮಿನಿಸ್ಟ್ರು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿಯವರಿಗೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯವರು ಮಂಗಳೂರಿಗೆ ಬೈಕ್ನಲ್ಲಿ ಯಾಕೆ ಹೋಗಬೇಕು. ನಡೆದುಕೊಂಡು ಹೋಗುವುದು ಸೂಕ್ತ. ನಡೆದುಕೊಂಡು ಹೋದರೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ನೀಡಿದ ಹೇಳಿಕೆಗೆ ಈಶ್ವರಪ್ಪ ಕೆಂಡಾಮಂಡಲವಾಗಿದ್ದಾರೆ. ಬೈಕ್ ರ್ಯಾಲಿಗೆ ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಅನುಮತಿ ನೀಡುತ್ತಾರೆ ಎನ್ನುವ ಗೃಹ ಸಚಿವರ ಹೇಳಿಕೆಯಿಂದ