ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿರುವುದಕ್ಕೆ ಅಸಮಾಧಾನಗೊಂಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕಣ್ಣೀರು ಹಾಕಿದ್ದಾರೆ. ಯಡಿಯೂರಪ್ಪ ನಿವಾಸದಲ್ಲಿ ಶಿವಮೊಗ್ಗ ನಗರ ಟಿಕೆಟ್ ಕುರಿತ ಚರ್ಚೆಯಲ್ಲಿ ನಡೆದ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿ, ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದ್ದಾರೆ. ನನ್ನ ಜೀವನದಲ್ಲಿ ಇಂತಹ ಮಾತು ಕೇಳಿರಲಿಲ್ಲ. ನನಗೆ ಅವಮಾನ ಆಗಿದೆ. ಇಂತಹ ಮಾತುಗಳನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.