ರಾಜ್ಯದ ಎಲ್ಲ ವಿಭಾಗೀಯ ಕೇಂದ್ರಗಳಲ್ಲಿ ಸರ್ಕಾರದಿಂದ ಟ್ರಾಮಾ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. ಟ್ರಾಮಾ ಕೇಂದ್ರಗಳ ಆರಂಭದಿಂದಾಗಿ ಬಡಜನರಿಗೆ ಅನುಕೂಲವಾಗಲಿದೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವೈದ್ಯರಿಗೆ ಟ್ರಾಮಾ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಾನು ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಎಲ್ಲ ವಿಭಾಗೀಯ ಕೇಂದ್ರಗಳಲ್ಲಿ ಟ್ರಾಮಾ ಹಾಗೂ ಸೂಪರ್ ಸ್ಪೆಷಿಯಾಲಿಟಿ ಆಸ್ಪತ್ರೆಗಳನ್ನು