ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ, ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಸುಮಾರು 80 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.ಎಚ್.ಕೆ.ಆರ್.ಡಿ.ಬಿ.ಯ 2017-18ನೇ ಸಾಲಿನ ಮ್ಯಾಕ್ರೋ ಅನುದಾನದಡಿಯಲ್ಲಿ ಮಹಾನಗರ ಪಾಲಿಕೆಯಿಂದ ಕೈಗೊಳ್ಳಲಾಗಿರುವ 7 ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾಮಾಜಿಕ ಮತ್ತು ರಾಜಕೀಯ ವಾತಾವರಣದಿಂದ ಒಳ್ಳೆಯ ಸಮಾಜ ನಿರ್ಮಾಣವಾಗಿ ಶಾಂತಿ ನೆಲೆಸುತ್ತದೆ ಕಾರಣ ಒಳ್ಳೆಯ ಸಮಾಜ ನಿರ್ಮಾಣಕ್ಕೆ ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು.