ಮುಖ್ಯಮಂತ್ರಿಯಾಗಿದ್ದ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರ ಇಲ್ಲ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಜನರು ಓಡಿಸಿದ್ದಾರೆ. ಇತ್ತ ಕೋಲಾರ ಕ್ಷೇತ್ರದ ಜನರು ಸಿದ್ದರಾಮಯ್ಯಗೆ ಜಾಡಿಸಿದ್ದಾರೆ. ವರುಣಾ ಕ್ಷೇತ್ರದ ಜನ ಬರಬೇಡಿ ಅಂತ ಕಲ್ಲು ಹಿಡಿದು ನಿಂತಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.