ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಮಾಯಸಂದ್ರ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ಇಂದು ಬೆಳಿಗ್ಗೆ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದರು. ರಾತ್ರಿ ಮಾಯಸಂದ್ರದ ಆದಿಚುಂಚಗಿರಿಯ ಮಠದ ಶಾಲೆಯ ಆಶ್ರಮದಲ್ಲಿ ಶಾಸಕ ಮಸಾಲೆ ಜಯರಾಂ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿಗಳಾದ ಅಜಯ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡಿದ್ದರು. ಬೆಳಿಗ್ಗೆ ಅಧಿಕಾರಿಗಳೊಂದಿಗೆ ಗ್ರಾಮದ ಸುತ್ತಾಟ ನಡೆಸಿದ