ರಾಜ್ಯದ ಮೈತ್ರಿ ಸರಕಾರದ ಚಳಿಗಾಲ ಅಧಿವೇಶನಕ್ಕೆ ಬೆಳಗಾವಿಯಲ್ಲಿರುವ ಸುವರ್ಣಸೌಧದಲ್ಲಿ ಸಿದ್ಧತೆಗಳು ಭರದಿಂದ ನಡೆದಿದ್ದು, ಅಂತಿಮ ಹಂತಕ್ಕೆ ತಲುಪಿವೆ. ಚಳಿಗಾಲ ಅಧಿವೇಶನವು ಡಿ.10 ರಿಂದ ಪ್ರಾರಂಭವಾಗಲಿದೆ. ಹೀಗಾಗಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಬಳಕೆ ಮಾಡದಿರುವ ಕಾರಣ ಸುವರ್ಣಸೌಧದ ಕೆಲವು ಪ್ರದೇಶಗಳಲ್ಲಿ, ಕಸ, ಪಾಚಿ ಇದ್ದಿತು. ಹೀಗಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. 2006ರಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಜತೆಗೆ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣಕ್ಕೂ ಶಂಕುಸ್ಥಾಪನೆ