ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಡಿಸಿಎಂ ಬೇಕು ಎಂಬ ಕೂಗು ಹೆಚ್ಚಾಗುತ್ತಲ್ಲೇ ಇದೆ. ಲೋಕಸಭಾ ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಮಾಡಿದರೆ ಒಳ್ಳೆಯದಾಗುತ್ತದೆ ಅಂತಾ ಸಚಿವ ಕೆಎನ್ ರಾಜಣ್ಣ ಪುನರುಚ್ಚರಿಸಿದ್ದಾರೆ. ರಾಹುಲ್ ಗಾಂಧಿ ಭೇಟಿ ಮಾಡಲು ದೆಹಲಿಗೆ ತೆರಳುವ ಮುನ್ನ ಅವರು ಹೆಚ್ಚುವರಿ ಡಿಸಿಎಂ ಆಯ್ಕೆ ಬಗ್ಗೆ ಮತ್ತೆ ಮಾತೆತ್ತಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಹೈಕಮಾಂಡ್ಗೆ ಸಲಹೆ ನೀಡಿದ್ದೇವೆ .ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧರಿರುವುದಾಗಿ ಹೇಳಿದರು.