ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ 80 ವರ್ಷ ವಯಸ್ಸಿನ ಎನ್.ಧರ್ಮಸಿಂಗ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಧರ್ಮಸಿಂಗ್ ಇಂದು ಬೆಳಿಗ್ಗೆ 9 ಗಂಟೆಗೆ ವಿಧಿವಶರಾಗಿದ್ದಾರೆ. ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಸದಾಶಿವ ನಗರದಲ್ಲಿರುವ ಅವರ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ. 2004ರಿಂದ 2006 ವರೆಗೆ ಮುಖ್ಯಮಂತ್ರಿಯಾಗಿದ್ದ ಧರ್ಮಸಿಂಗ್, ಕರ್ನಾಟಕದ 17ನೇ ಮುಖ್ಯಮಂತ್ರಿ ಎನ್ನುವ ಗೌರವಕ್ಕೆ ಪಾತ್ರರಾಗಿದ್ದರು. 1978 ರಿಂದ 2008 ರವರೆಗೆ ನಿರಂತರವಾಗಿ ವಿಧಾನಸಭೆಗೆ ಚುನಾವಣೆಯಲ್ಲಿ ಜಯಗಳಿಸಿ