ಬೆಂಗಳೂರು: ಹಿಜಾಬ್ ನಿಷೇಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಈಗ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ.ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಹೋಗುವುದಕ್ಕೆ ಯಾವುದೇ ತಕರಾರು ಇಲ್ಲ. ಇದಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.ನಾವು ಕೂಡಾ ಇನ್ನು ಕೇಸರಿಮಯವಾಗಿ ಶಾಲಾ, ಕಾಲೇಜಿಗೆ ಹೋಗಬೇಕಾಗುತ್ತದೆ ಎಂದು ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ಹಿಂದೆ ಬಿಜೆಪಿ