ದಾಂಡೇಲಿ ತಾಲೂಕು ಹೋರಾಟಗಾರ, ವಕೀಲ ಅಜಿತ್ ನಾಯಕ (57) ಅವರ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಪಟ್ಟಣದ ಬಸ್ ನಿಲ್ದಾಣದ ಸಮೀಪದ ಜೆ.ಎನ್.ರಸ್ತೆಯಲ್ಲಿರುವ ತಮ್ಮ ಕಛೇರಿಯಿಂದ ಕೆಳಗಿಳಿದು ಬರುವಾಗ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಬಂದು ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ರಕ್ತದ ಮಡುವಿನಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದಾರೆ. ಅಜಿತ್ ನಾಯಕ ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು. ದಾಂಡೇಲಿಯನ್ನು