ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ವಿಕ್ರಂ ಆಸ್ಪತ್ರೆಗೆ ಅಂಬರೀಷ್ ದಾಖಲಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅಂಬರೀಷ್ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದು ಆತಂಕ ಪಡುವ ಅಗತ್ಯವಿಲ್ಲ. ಶೀಘ್ರದಲ್ಲಿಯೇ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಮಾಜಿ ಸಚಿವ ಅಂಬರೀಷ್ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆಸ್ಪತ್ರೆಗೆ