ಕೊಡಗಿನ ಮೇಲೆ ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ನರಮೇಧ ಮಾಡುವ ಆಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಹಾಪುರದಲ್ಲಿ ಮಾತನಾಡಿದ ಅವರು, ರಾಷ್ಟ್ರದ್ರೋಹಿಗಳನ್ನು ಬೆಳಸಿದವರು ಯಾರು.. ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಗೋವುಗಳನ್ನು ಕಳ್ಳತನ ಮಾಡಿದ್ದರು. ಗೋವುಗಳ ರಕ್ಷಣೆಗೆ ಮುಂದಾಗಿದ್ದ ಹಿಂದೂ ಯುವಕರ ಕಗ್ಗೊಲೆ ಆಗಿತ್ತು. ಗೂಂಡಾಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕಿತ್ತು. ಆದ್ರೆ ಸಿದ್ದರಾಮಯ್ಯನವರು PFI, SDPIಯನ್ನು ಬೆಳೆಸಿದರು.