ಮಾಜಿ ಸಚಿವ ಎಚ್.ವೈ ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲವಾದ್ದರಿಂದ ಅವರಿಗೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇನ್ನೆರಡು ದಿನಗಳಲ್ಲಿ ಸಿಐಡಿ ವರದಿ ಸರಕಾರಕ್ಕೆ ತಲುಪಲಿದೆ. ಮೇಟಿ ರಾಸಲೀಲೆ ಪ್ರಕರಣದ ವಿರುದ್ಧ ದೂರುಗಳು ಬಂದಿಲ್ಲವಾದ್ದರಿಂದ ಅವರನ್ನು ಆರೋಪದಿಂದ ಮುಕ್ತಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಡಿಸೆಂಬರ್ 12