ಬೆಂಗಳೂರು: ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ಕಾಂಗ್ರೆಸ್ ನಲ್ಲಿ ಇತ್ತೀಚೆಗಿನ ಬೆಳವಣಿಗೆಗಳಿಂದ ಬೇಸತ್ತಿರುವ ನರೇಂದ್ರಬಾಬು ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಇಂದು ಸಂಜೆ ರಾಜಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಕಾರ್ಯಕರ್ತರೊಂದಿಗೆ ಅನೌಪಚಾರಿಕ ಸಭೆ ನಡೆಸಿ, ತಮ್ಮ ರಾಜಕೀಯ ನಡೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನಂತರ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.10 ಕಾರಣಗಳನ್ನು ನೀಡಿ ಕಾಂಗ್ರೆಸ್