ಕೊನೆಗೂ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಇಂದು ಖಾಸಗಿ ಹೋಟೆಲ್ನಲ್ಲಿ ನಡೆದ ಬೆಂಬಲಿಗರು, ಹಿತೈಷಿಗಳ ಸಭೆಯಲ್ಲಿ ಎಚ್.ವಿಶ್ವನಾಥ್, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸಿದ್ದರಾಮಯ್ಯರಿರುವ ಕಾಂಗ್ರೆಸ್ ಪಕ್ಷದಲ್ಲಿ ನಾನಿರುವುದಿಲ್ಲ ಎಂದು ಗುಡುಗಿದರು. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ ಅವರು, ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ದ್ವೇಷವಿಲ್ಲ. ಅಧಿಕಾರದಲ್ಲಿರುವವರು ಕಾಂಗ್ರೆಸ್ ಪಕ್ಷವನ್ನು ವಿನಾಶದ ಅಂಚಿಗೆ ತಳ್ಳಿದ್ದಾರೆ ಎಂದು