ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಮತ್ತಷ್ಟು ಮಂದಿ ಅಸಮಾಧಾನ ಹೊರ ಹಾಕಿದ್ದಾರೆ.ಇದೀಗ ಆ ಪಟ್ಟಿಗೆ ಮಾಜಿ ಸಂಸದ ಶಿವರಾಮೇಗೌಡ ಸೇರಿದ್ದಾರೆ. ಗಂಗಾವತಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವರಾಮೇಗೌಡ ನನಗೆ ಟಿಕೆಟ್ ನೀಡಿಲ್ಲ ಅಂತ ಬೇಸರವಿಲ್ಲ. ಆದರೆ ನಮ್ಮ ಸಮುದಾಯಕ್ಕೆ ಇಲ್ಲಿ ಟಿಕೆಟ್ ನೀಡದೇ ಬಿಜೆಪಿ ಅನ್ಯಾಯ ಮಾಡಿದೆ ಎಂದು ದೂರಿದ್ದಾರೆ.ಪಂಚಮಸಾಲಿ ಸಮುದಾಯದವರಾದ ಶಿವರಾಮೇಗೌಡ ಗಂಗಾವತಿ ಟಿಕೆಟ್ ಗೆ ಬೇಡಿಕೆಯಿಟ್ಟಿದ್ದರು. ಆದರೆ ಇದೀಗ ಅವರಿಗೆ ಟಿಕೆಟ್ ನೀಡಲಾಗಿಲ್ಲ.