ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಪ್ರಧಾನಿ ಮೋದಿಯನ್ನು ಭೇಟಿಯಾದ ದೇವೇಗೌಡರು, ಹಾಸನದ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭೀಷೇಕ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಮಹಾಮಸ್ತಕಾಭಿಷೇಕವು 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಈ ಹಬ್ಬದಲ್ಲಿ ಗೊಮ್ಮಟೇಶ್ವರ ಮೂರ್ತಿಗೆ ಅಭಿಷೇಕವನ್ನು ಮಾಡಲಾಗುತ್ತದೆ. ಕೇಸರಿ, ತುಪ್ಪ, ಹಾಲು, ಮೊಸರು, ಚಿನ್ನದ ನಾಣ್ಯ ಮತ್ತು ಹಲವು ವಸ್ತುಗಳಿಂದ ಈ ಏಕಶಿಲಾ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ.