ಜಿಲ್ಲೆಯಲ್ಲಿ ವಯಸ್ಕರಿಗಿಂತ ಮಕ್ಕಳ ಮೇಲೆಯೇ ಹೆಚ್ಚು ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಪ್ರಕರಣಗಳು ದಾಖಲಾಗುತ್ತಿವೆ. ಈ ರೀತಿಯ ಘಟನೆಗಳು ಆತಂಕ ಸೃಷ್ಟಿಸಿವೆ. ಇದೇ ವರ್ಷ ಜನವರಿಯಿಂದ ಸೆಪ್ಟೆಂಬರ್ ವರೆಗೆ ಬೆಳಗಾವಿ ನಗರ ಪೊಲೀಸ್ ವ್ಯಾಪ್ತಿ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪೋಕ್ಸೊ (ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ) ಅಡಿ 84 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಗ್ರಾಮೀಣ ಭಾಗದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಈ