ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕೋಮು ಸೂಕ್ಷ್ಮ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಾಗಿದೆ. 3 ದಿನಗಳ ಕಾಲ ಕಠಿಣ ಪರಿಸ್ಥಿತಿ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.ಈ ಬೆನ್ನಲ್ಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು. ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರೆಸಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ