ಧಾರವಾಡ : ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳು ಗರಿಗೆದರಿವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸೆರೆ ಸಿಕ್ಕ ಶಂಕಿತ ಉಗ್ರರ ಬಳಿ ಪಿಸ್ತೂಲ್, ಸಜೀವ ಗುಂಡು, ಸ್ಯಾಟ್ಲೈಟ್ ಫೋನ್ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಕೆಟ್ಟ ಹುಳಗಳು, ಹಾವು ಹಾಗೂ ಚೇಳುಗಳು ಹೊರ