ರಾಜ್ಯದ 15 ಕ್ಷೇತ್ರಗಳಲ್ಲಿ ಉಪ ಚುನಾವಣೆಯ ಕಾವು ತಣ್ಣಗಾಗಿದೆ. ಇದೀಗ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ತವರು ಕ್ಷೇತ್ರವಾದ ಕೆ.ಆರ್.ಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಜೆಡಿಎಸ್ - ಬಿಜೆಪಿ ಅಭ್ಯರ್ಥಿ ಪರ ಬೆಟ್ಟಿಂಗ್ ಕಾರ್ಯ ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಗೆಲ್ಲೋ ವಿಶ್ವಾಸದಲ್ಲಿ ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.ಅರಳಿಕಟ್ಪೆ, ಟೀ ಸ್ಟಾಲ್, ಹೋಟೆಲ್ ಗಳಲ್ಲಿ ರಾಜಕೀಯದ್ದೇ ಚರ್ಚೆ