ಕೋಲಾರ : ಕೋಲಾರ ಸ್ಪರ್ಧೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಿಂದೆ ಸರಿಯುವ ಸೂಚನೆ ನೀಡಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೋಲಾರದಲ್ಲಿ ಸಿದ್ದು ಬದಲಿಗೆ ಕಾಂಗ್ರೆಸ್ನಿಂದ ಅಭ್ಯರ್ಥಿ ಯಾರು ಎನ್ನುವ ಕುರಿತು ಚರ್ಚೆ ಜೋರಾಗಿದ್ದು, ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಬಣ ರಾಜಕೀಯ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಕೋಲಾರ ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚಟುವಟಿಕೆಗಳು