ರಾಮನಗರ : ಸಾಯಿಬಾಬಾನ 3ನೇ ಅವತಾರ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ವ್ಯಕ್ತಿ ವಿರುದ್ಧ ರಾಮನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಅಕಾರಾಂ ಸರಗಾರ್ ಕಳೆದ 8 ತಿಂಗಳ ಹಿಂದೆ ಚನ್ನಪಟ್ಟಣಕ್ಕೆ ಬಂದಿದ್ದನು. ಈ ವೇಳೆ ತಾನು ಪ್ರೇಮ ಸಾಯಿ, ದೇವ ಮಾನವ ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದನು.ಸಿಂಧೂ ಎಂಬುವವರ ತೋಟದ ಮನೆಯಲ್ಲಿ ಪ್ರತಿನಿತ್ಯ ಭಜನೆ, ಪೂಜೆ ಮಾಡಿ ಹಣ ವಸೂಲಿ ಮಾಡುತ್ತಿದ್ದನು. ಶ್ರೀ