ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ನಿನ್ನೆ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.ಇತ್ತೀಚಿಗೆ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಸರಿಯಾಗಿ 12 ದಿವಸದ ಹಿಂದೆ ಡಿಸೆಂಬರ್ 1 ರಂದು ಬೆಂಗಳೂರಿನ 60ಕ್ಕೂ ಹೆಚ್ಚು