ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಮೈಸೂರು ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಮೈಸೂರಿನ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಲವು ನಿವೇಶನ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದು, ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡ ಕೈವಾಡ ತಿಳಿದು ಬಂದಿದೆ. ಅದರಂತೆ ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೆ ಖತರ್ನಾಕ್ ತಂಡ ಮೋಸ ಮಾಡಿದೆ.