ಅಂತಾರಾಜ್ಯ ವಿವಿ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಪಡೆದು ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ (ಸಿಪಿಆರ್ಐ)ಗೆ ಸಲ್ಲಿಸಿ ಉದ್ಯೋಗ ಪಡೆದಿದ್ದ ಎಂಜಿನಿಯರ್ವೊಬ್ಬ ಸಿಂಧುತ್ವ ಪರೀಕ್ಷೆ ವೇಳೆ ಸಿಕ್ಕಿಬಿದ್ದಿದ್ದಾನೆ. ನಕಲಿ ಅಂಕಪಟ್ಟಿ ಸಲ್ಲಿಸಿದ ಆರೋಪದಡಿ ನ್ಯೂ ಬಿಇಎಲ್ ರಸ್ತೆಯ ನಿವಾಸಿಯಾ ಮನೀಶ್ ಸಿಂಗ್ (26) ಎಂಬುವರ ವಿರುದ್ಧ ಎಫ್?ಐಆರ್ ದಾಖಲಾಗಿದೆ. 2018ನೇ ಸಾಲಿನಲ್ಲಿ ಸಿಪಿಆರ್ಐ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಎಂಜಿನಿಯರ್ ಹುದ್ದೆಗೆ ಮನೀಶ್ ಸಿಂಗ್ ನೇಮಕಗೊಂಡಿದ್ದರು. ನೇಮಕಾತಿ ವೇಳೆ ಮನೀಶ್ ಸಲ್ಲಿಸಿದ್ದ ಐಐಟಿ