ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಇಂದು ರೈತ ಹುತಾತ್ಮ ದಿನಾಚರಣೆ ಆಚರಿಸಲಾಗುಲುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರೈತ ಹುತಾತ್ಮ ದಿನಾಚಾರಣೆಯಲ್ಲಿ ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟದ ಮುಂದಿನ ನಡೆ ಕುರಿತು ಚರ್ಚೆ ನಡೆಸಲಾಗುವುದು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವೇತನ ಹೆಚ್ಚಳವಾಗುತ್ತಿದೆ. ಆದರೆ, ರೈತರ ಆದಾಯ ಹೆಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.