ಬೆಂಗಳೂರು: ಕೃಷಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ಎಂದು ಪ್ರಶ್ನಿಸಿದ್ದ ಸಿಎಂ ಕುಮಾರಸ್ವಾಮಿ ವಿರುದ್ಧ ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬೆಳಗಾವಿಯಲ್ಲೂ ಸಿಎಂ ವಿರುದ್ಧ ಪ್ರತಿಭಟನೆಗಳು ಜೋರಾಗಿದ್ದು, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಿಎಂ ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ರೈತ