ಟೊಮೊಟೊ ಬೆಲೆ ತೀವ್ರ ಕುಸಿತ ಕಂಡಿರುವುದರಿಂದ ಬೆಳೆಗಾರರು ನೂರಾರು ಕೆಜಿ ಟೊಮೆಟೊವನ್ನು ರಸ್ತೆ ಬದಿ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿದ್ದಾರೆ.ಒಂದು ತಿಂಗಳಿನಿಂದ ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಹಾಗೂ ಈ ಬಾರಿ ಟೊಮೆಟೊ ಭಾರಿ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿರುವುದರಿಂದ ಬೇಡಿಕೆ ಕುಸಿದಿದೆ.ಬೇಡಿಕೆ ಇಲ್ಲದಿರುವುದರಿಂದ ವ್ಯಾಪಾರಿಗಳು, ಮಧ್ಯವರ್ತಿಗಳು ಕಡಿಮೆ ಬೆಲೆಗೆ ಟೊಮೆಟೊ ಕೇಳುತ್ತಿದ್ದಾರೆ. ಹಾಕಿದ ಬಂಡವಾಳವೂ ಕೈಸೇರದ ಕೋಪದಲ್ಲಿ ಟೊಮೆಟೊವನ್ನು ರಸ್ತೆ ಬದಿ, ಎಪಿಎಂಸಿ ಆವರಣದಲ್ಲೇ ಸುರಿದು ಹೋಗುತ್ತಿದ್ದಾರೆ.ಕೇಳುವ ಬೆಲೆಗೆ ಮಾರಿದರೂ ಕಮಿಷನ್