ಸತತ ಬರಗಾಲದಿಂದ ತತ್ತರಿಸಿರುವ ಗಡಿ ಜಿಲ್ಲೆ ಜನರು ನೀರಿಗಾಗಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.ಚಾಮರಾಜನಗರದಲ್ಲಿನ ಕೆರೆಗಳಿಗೆ ನೀರುವ ತುಂಬಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಈ ಹಿಂದಿನ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ಸತತ ಬರಗಾಲಕ್ಕೆ ತುತ್ತಾಗಿದ್ದ ಚಾಮರಾಜನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನ ಜಾರಿಗಳಿಸಿವೆ. ಅದನ್ನ ಸಮರ್ಪಕವಾಗಿ ಜಾರಿಗೊಳಿಸಲು ರಾಜ್ಯದ ಸಮ್ಮಿಶ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ