ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಅಂತ್ಯ ಕಂಡಿದ್ದಾರೆ. ತಾವರೆ ಹೂವು ಕೀಳಲು ಹೋಗಿ ತಂದೆ, ಮಗ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾದ ಪುಟ್ಟರಾಜು, ಮಗ ಕೇಶವ ಮೃತ ದುರ್ದೈವಿಗಳು. ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಪ್ಲಾನ್ ಮಾಡಿದ್ದರು. ಹೀಗಾಗಿ ಹೂ ತರಲು