ಚಿಕ್ಕಬಳ್ಳಾಪುರ: ಗಂಡು ಮಗು ಬೇಕೆಂಬ ದುರಾಸೆಗೆ ಬಿದ್ದ ಪಾಪಿ ತಂದೆ ತನ್ನ ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮುನಿಯಪ್ಪ ಎಂಬ ಆರೋಪಿ ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ಕದ್ದು ಮುಚ್ಚಿ ಮಾರಾಟ ಮಾಡಲೆತ್ನಿಸಿದ್ದು, ಇದನ್ನು ವಿರೋಧಿಸಿದ ಪತ್ನಿಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾನೆ.ನಾಲ್ವರು ಮಕ್ಕಳ ಪೈಕಿ ಇಬ್ಬರೊಂದಿಗೆ ಮನೆಯಿಂದ ಹೊರಬಂದಿದ್ದ ಪತ್ನಿ ಚಿಕ್ಕಬಳ್ಳಾಪುರದ ಮಹಿಳಾ ಮತ್ತು ಮಕ್ಕಳ ಸಾಂತ್ವನ ಕೇಂದ್ರದ ಅಧಿಕಾರಿಗಳಿಗೆ ದೂರು ನೀಡಿದ್ದಾಳೆ. ಅಧಿಕಾರಿಗಳು