ದೋಷಪೂರಿತ ನಂಬರ್ ಪ್ಲೇಟ್ಗಳನ್ನು ಜೂನ್ 10 ರೊಳಗೆ ಸರಿಪಡಿಸಿಕೊಳ್ಳದಿದ್ದರೆ ದಂಡ ವಿಧಿಸಲಾಗುವುದು ಎಂದು ವಾಹನ ಸವಾರರಿಗೆ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 7 ದಿನದೊಳಗಾಗಿ ನಂಬರ್ ಪ್ಲೇಟ್ ದೋಷ ಸರಿಪಡಿಸಿಕೊಳ್ಳದಿದ್ದರೆ ಎರಡು ಬಾರಿ ಸಿಕ್ಕಿಬಿದ್ದರೆ ದಂಡ ವಿಧಿಸಲಾಗುವುದು. ಮೂರನೇ ಬಾರಿಯೂ ತಪ್ಪು ತಿದ್ದಿಕೊಳ್ಳದೇ ಇದ್ದರೆ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ. ಸಾರಿಗೆ ಇಲಾಖೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಟಿಎಚ್ಎಂ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಸಾರ್ವಜನಿಕರಿಗೆ ದೋಷಯುಕ್ತ