ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ. ಇದು ಖಾಸಗಿ ಜಾಗವಾಗಿದ್ದು ಸುಮಾರು