ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತದೆ. ಹೀಗೆ ಮುಂದುವರಿದಲ್ಲಿ ಸಂಕಷ್ಟ ಸ್ಥಿತಿ ಎದುರಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಉಮ್ಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇತ್ತ ಕಡೆ ರೈತರು ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸುತ್ತಿದ್ದಾರೆ ಎಂದರು. ಕಾವೇರಿ ಕೊಳ್ಳದಲ್ಲಿ ನೀರಿಲ್ಲದಿದ್ದರೇ ಹೇಗೆ ತಾನೇ ನೀರು ಬಿಡಲು ಸಾಧ್ಯ? ಮಳೆ ಬರಲಿ ಎಂದು ವರುಣನಿಗೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.