ಮಂಗಳೂರು: ನಗರದಲ್ಲಿ ಸುಮಾರು 7,500 ಕೋಟಿ ರು. ಹೂಡಿಕೆಯಲ್ಲಿ ರಸಗೊಬ್ಬರ ಕಾರ್ಖಾನ ಆರಂಭಿಸುವ ಸಿದ್ಧತೆ ನಡೆಯುತ್ತಿದ್ದು, ಇದರಿಂದ 10 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ದೊರಕಲಿದೆ. ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮ್ಮೇಳನಕ್ಕಿಂತ ಮೊದಲೇ ಇದರ ಕಾರ್ಯಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ನಗರದ ಹೋಟೆಲ್ ಓಷಿಯನ್ ಪರ್ಲ್ನಲ್ಲಿ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳಿ, ಸ್ಟೇಟ್