ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವ ರಮೇಶ್ ಜಾರಕಿಹೊಳಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತನ್ನು ವಶಪಡಿಸಿಕೊಂಡಿದ್ದಾರೆ. ಸಧ್ಯದಲ್ಲಿಯೇ ಮತ್ತಷ್ಟು ನಾಯಕರು ಐಟಿ ಬಲೆಗೆ ಬೀಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಐಟಿ ಬಲೆಗೆ ಬಿದ್ದಿದ್ದಾರೆ. ಸಧ್ಯದಲ್ಲಿಯೇ ಮತ್ತಷ್ಟು ನಾಯಕರು ಐಟಿ ಬಲೆಗೆ ಬಿಳಲಿದ್ದಾರೆ ಎಂದರು. ತಮ್ಮ