ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ಚುನಾವಣಾ ಕಣ ರಂಗೇರಿದೆ. ಅಫಜಲಪುರ ಕ್ಷೇತ್ರದಲ್ಲಿ ಗುತ್ತೇದಾರ್ ಸಹೋದರರ ನಡುವೆ ಬಿಗ್ ಫೈಟ್ ಶುರುವಾಗಿದೆ. ಮಾಲೀಕಯ್ಯ ಗುತ್ತೇದಾರ್ ಹಾಗೂ ಸಹೋದರ ನಿತಿನ್ ಮಧ್ಯೆ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಯಿಂದ ಮಾಲೀಕಯ್ಯ ಗುತ್ತೇದಾರ್ ಕಣಕ್ಕಿಳಿದಿದ್ದಾರೆ.