ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ವರದಿಯಾಗಿದೆ. ರಾತ್ರೋರಾತ್ರಿ ಕಾಲೋನಿಗೆ ನುಗ್ಗಿ ಗಲಾಟೆ ನಡೆದಿದೆ. ಘಟನೆಯಲ್ಲಿ ಐದು ಬೈಕ್ ಗಳು ಜಖಂಗೊಂಡಿವೆ. ಅಲ್ಲದೇ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಸಧ್ಯ ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಿದೆ. ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಯಡೇಹಳ್ಳಿಯಲ್ಲಿ ಎಸ್ ಸಿ ಹಾಗು ಎಸ್ ಟಿ ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ಎಸ್ ಸಿ ಸಮುದಾಯದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ರಾತ್ರೋರಾತ್ರಿ