ಸನಾತನ ಧರ್ಮವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದ್ದ ಸಚಿವ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.ಹಾಗೂ ಈ ಹೇಳಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇದೀಗ ಉದಯನಿಧಿ ಸ್ಟಾಲಿನ್ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ. ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ವಯಂ ಪ್ರೇರಿತ